ಉಪ್ಪಿನಂಗಡಿ: ಎ. 10: ಆತೂರಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ
ಉಪ್ಪಿನಂಗಡಿ: ಎಸ್.ಕೆ.ಎಸ್.ಎಸ್.ಎಫ್., ಎಸ್.ವೈ.ಎಸ್. ಆತೂರು ಶಾಖೆ ಆಶ್ರಯದಲ್ಲಿ ಎ. 10ರಂದು ಭಾನುವಾರ ಆತೂರು ಬದ್ರಿಯಾ ಮಸೀದಿ ಸಭಾಂಗಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಎಸ್.ಕೆ.ಎಸ್.ಎಸ್.ಎಫ್., ಎಸ್.ವೈ.ಎಸ್. ಆತೂರು ಶಾಖೆ ಇದರ ಗೌರವಾಧ್ಯಕ್ಷ ಡಾ ಕೆ.ಎಂ. ಶಾಹ್ ಮುಸ್ಲಿಯಾರ್ ಆತೂರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹಮದ್ ಮುಸ್ಲಿಯಾರ್ ಮತ್ತು ಸಮಸ್ತ ಕೇಂದ್ರ ಸಮಿತಿ ಸದಸ್ಯ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲು ನಿಖಾಹ ನೇತೃತ್ವ ವಹಿಸಲಿದ್ದಾರೆ.
ಆತೂರು ಬದ್ರಿಯಾ ಜುಮಾ ಮಸೀದಿ ಮುದರ್ರಿಸ್ ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಗಂಡಿಬಾಗಿಲು ಮಸೀದಿ ಖತೀಬ್ ಅನಸ್ ತಂಙಳ್ ದುವಾಃ ನೆರವೇರಿಸಲಿದ್ದಾರೆ. ಆರೋಗ್ಯ ಸಚಿವ ಯು.ಟಿ. ಖಾದರ್ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.