ಪುತ್ತೂರು: ಬಾಲವನದಲಿ ಮಲ್ಟಿ ಜಿಮ್ ಉದ್ಗಾಟನೆ
ಪುತ್ತೂರು: ದ.ಕ ಜಿ.ಪಂ, ಜಿಲ್ಲಾ ಯುವಜನ ಸೇವಾ ಕ್ರೀಡಾ ಇಲಾಖೆ ಇದರ ವತಿಯಿಂದ ಪರ್ಲಡ್ಕ ಡಾ| ಶಿವರಾಮ ಕಾರಂತ ಬಾಲವನದಲ್ಲಿ ಎ.8ರಂದು ಮಲ್ಟಿ ಜಿಮ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೀನುಗಾರಿಕೆ ಸಚಿವ ಅಭಯಚಂದ್ರ ಜೈನ್‌ರವರು ಜಿಮ್ ಘಟಕವನ್ನು ಉದ್ಘಾಟಿಸಿದರು. ರಾಜ್ಯ ಸಂಸದೀಯ ಕಾರ್ಯದರ್ಶಿ, ಶಾಸಕಿ ಶಕುಂತಳಾ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಕಮೀಷನರ್ ಡಾ. ರಾಜೇಂದ್ರ ಕೆ.ವಿ, ಎ.ಎಸ್ಪಿ ರಿಷ್ಯಂತ್, ಬಾಲವನ ಈಜುಕೊಳ ಸಮಿತಿ ಅಧ್ಯಕ್ಷ ಸೀತಾರಾಮ ರೈ ಸವಣೂರು, ಬಾಲವನ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ವಿಜಯ ಹಾರ್ವಿನ್, ಯುವಜನ ಸೇವಾ ಕ್ರೀಡಾ ಇಲಾಖೆಯ ಉಪನಿರ್ದೇಶಕ ಪಾಂಡುರಂಗ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಯುವಜನ ಸೇವಾ ಕ್ರೀಡಾ ಇಲಾಖೆಯ ನಿವೃತ್ತ ಅಧಿಕಾರಿ ಮಾಧವ ಬಿ.ಕೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಝಲ್ ರಹೀಂ, ಪ್ರಧಾನ ಕಾರ್ಯದರ್ಶಿ ಮಹೇಶ್ ರೈ ಅಂಕೊತ್ತಿಮಾರ್, ಕೆಡಿಪಿ ಸದಸ್ಯ ಕೃಷ್ಣ ಪ್ರಸಾದ್ ಆಳ್ವ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಾಮಚ್ಚನ್, ತಹಶೀಲ್ದಾರ್ ಸಣ್ಣರಂಗಯ್ಯ, ಇತರ ಇಲಾಖಾಧಿಕಾರಿಗಳು, ಬಾಲವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಸೀತಾರಾಮ ರೈ ಸವಣೂರು ಸ್ವಾಗತಿಸಿ, ವಿಜಯ ಹಾರ್ವಿನ್ ವಂದಿಸಿದರು. ಸರಕಾರಿ ಪ್ರ.ದ ಕಾಲೇಜು ಬೆಟ್ಟಂಪಾಡಿಯ ದೈ.ಶಿ.ಶಿ ಎವರೆಸ್ಟ್ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು