×
Ad

ಉಡುಪಿ : ಬಿಜೆಪಿ ಮಹಿಳಾ ಮೋರ್ಚಾ ಧರಣಿ

Update: 2016-04-09 23:47 IST

ಉಡುಪಿ, ಎ.9: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ‘ಎಸಿಬಿ ಹಠಾವೋ ಲೋಕಾ ಬಚಾವೋ’ ರಾಜ್ಯ ಕಾಂಗ್ರೆಸ್ ಸರಕಾರ ರಚಿಸಲು ಉದ್ದೇಶಿಸಿರುವ ಭ್ರಷ್ಟಾಚಾರ ನಿಗ್ರಹ ದಳವನ್ನು ಕೂಡಲೇ ರದ್ದುಗೊಳಿಸುವಂತೆ ಆಗ್ರಹಿಸಿ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಎದುರು ಧರಣಿ ಹಮ್ಮಿಕೊಳ್ಳಲಾಗಿತ್ತು.

ಸಭೆಯನ್ನುದ್ದೇಶಿಸಿ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಶೀಲಾ ಕೆ.ಶೆಟ್ಟಿ ಮಾತನಾಡಿದರು. ಜಿಪಂ ಸದಸ್ಯರಾದ ರೇಷ್ಮಾ ಉದಯ ಶೆಟ್ಟಿ, ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಲಕ್ಷ್ಮೀ ಬಿಲ್ಲವ, ಮಹಿಳಾ ನಾಯಕಿಯರಾದ ಸಂಧ್ಯಾ ರಮೇಶ್, ರೂಪಾ ಪೈ, ನಳಿನಿ ಪ್ರದೀಪ್, ಸುಮಿತ್ರಾ ನಾಯಕ್, ವೀಣಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News