ವಿಟ್ಲ : ಚುನಾವಣಾ ವೀಕ್ಷಕರಾಗಿ ಆಯ್ಕೆ
Update: 2016-04-11 21:21 IST
ಎಪ್ರಿಲ್ 24ರಂದು ವಿಟ್ಲ ಮತ್ತು ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಸೂಚನೆಯಂತೆ ಚುನಾವಣಾ ವೀಕ್ಷಕರನ್ನು ನೇಮಿಸಲಾಗಿದೆ.
ವಿಟ್ಲ ಪಟ್ಟಣ ಪಂಚಾಯತ್‌ಗೆ ಮಿಥುನ್ ರೈ ಹಾಗೂ ಅಬ್ದುಲ್ ರವೂಫ್ ಮತ್ತು ಕೋಟೆಕಾರು ಪಟ್ಟಣ ಪಂಚಾಯತ್‌ಗೆ ಮೇಯರ್ ಹರಿನಾಥ್ ಹಾಗೂ ಪ್ರವೀಣ್ ಚಂದ್ರ ಆಳ್ವ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷ ಹಾಗೂ ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ