×
Ad

ತಾಯಿ-ಮಗು ಆಸ್ಪತ್ರೆ ಶೀಘ್ರವೇ ಸಾರ್ವಜನಿಕ ಸೇವೆಗೆ ಲಭ್ಯ: ಕಾಗೋಡು ತಿಮ್ಮಪ್ಪ

Update: 2016-04-11 22:11 IST

ಸಾಗರ, ಎ. 11: ನಗರವ್ಯಾಪ್ತಿಯಲ್ಲಿ ಸುಮಾರು 10 ಕೋಟಿ ರೂ. ಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾಯಿ - ಮಗು ಆಸ್ಪತ್ರೆ ಕಾಮಗಾರಿ ಈ ತಿಂಗಳ ಅಂತ್ಯದಲ್ಲಿ ಮುಗಿಯಲಿದ್ದು, ಶೀಘ್ರವೇ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ತಿಳಿಸಿದರು. ತಾಲೂಕಿನ ಉಳ್ಳೂರಿನಲ್ಲಿ ಸೋಮವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, 60 ಹಾಸಿಗೆ ಸಾಮರ್ಥ್ಯದ ತಾಯಿ-ಮಗು ಆಸ್ಪತ್ರೆ ಪ್ರಾರಂಭವಾದರೆ, ಮಹಿಳೆಯರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗಲಿದೆ ಎಂದು ತಿಳಿಸಿದರು.

ತಾಲೂಕಿನ ತಡಗಳಲೆಯಲ್ಲೂ ಇದೇ ಮಾದರಿಯಲ್ಲಿ 1.05 ಕೋಟಿ ರೂ. ವೆಚ್ಚದಲ್ಲಿ ನೂತನ ಆಸ್ಪತ್ರೆಯನ್ನು ನಿರ್ಮಾಣ ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ. ವೈದ್ಯರ ಕೊರತೆ ಬಹುತೇಕ ನೀಗಿದ್ದು, ತುಮರಿ, ಬ್ಯಾಕೋಡ್ ಹಾಗೂ ಹೆಗ್ಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕ ಮಾಡಲಾಗಿದೆ. ಕಾಗೋಡು ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕವಾಗಿ ಆರ್ಯುವೇದ ವೈದ್ಯರನ್ನು ನೇಮಕ ಮಾಡ ಲಾಗಿದೆ ಎಂದು ತಿಳಿಸಿದರು. ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ಡಿಜಿಟಲ್ ಎಕ್ಸ್‌ರೇ ಯಂತ್ರ ಶೀಘ್ರವೇ ಬರಲಿದೆ. ಜೊತೆಗೆ 
 ೆಚ್ಚುವರಿಯಾಗಿ ಇನ್ನೊಂದು ಆ್ಯಂಬುಲೆನ್ಸ್ ನೀಡ ಲಾಗಿದ್ದು, ಅದು ಮಂಗಳವಾರದಿಂದ ತನ್ನ ಸೇವೆಯನ್ನು ಆರಂಭಿಸಲಿದೆ. ತಾಲೂಕಿನ ಆಸ್ಪತ್ರೆಯಲ್ಲಿ ಕೊರತೆ ಇರುವ ವೈದ್ಯ ಸಿಬ್ಬಂದಿ ನೇಮಕಕ್ಕೆ ಸಂಬಂಧಪಟ್ಟಂತೆ ಕಾಲಕಾಲಕ್ಕೆ ಮಾಹಿತಿ ಪಡೆದು ಭರ್ತಿ ಮಾಡುವ ಕೆಲಸವನ್ನು ಮಾಡಲಾಗಿದೆ ಎಂದು ತಿಳಿಸಿದರು. ಹೊಸದಾಗಿ ವೈದ್ಯಪದವಿ ಪಡೆದವರು ಸರಕಾರಿ ಆಸ್ಪತ್ರೆ ಗಳಲ್ಲಿ ಸೇವೆ ಸಲ್ಲಿಸಬೇಕು ಎಂಬ ನಿಯಮವನ್ನು ಸರಕಾರ ಜಾರಿಗೆ ತಂದಿದ್ದರೂ ಅದು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ. ಈ ಬಗ್ಗೆ ಇನ್ನಷ್ಟು ಗಂಭೀರ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ. ಸರಕಾರಿ ಆಸ್ಪತ್ರೆಯಲ್ಲಿ ಗುಣ ಮಟ್ಟದ ಆರೋಗ್ಯಸೇವೆ ಸಿಗುವಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ಆರೋಗ್ಯ ಇಲಾಖೆ ಮೇಲೆ ಇದೆ ಎಂದು ಹೇಳಿದರು.
ಈ 

ಂದರ್ಭದಲ್ಲಿ ಜಿಪಂ ಸದಸ್ಯ ಆರ್.ಸಿ.ಮಂಜುನಾಥ್, ತಾಪಂ ಸದಸ್ಯ ರಘುಪತಿ ಭಟ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಪಿ.ಅಚ್ಚುತ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಕಾಂತರಾಜ್, ಡಾ. ರಾಜೇಂದ್ರ, ಉಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವರಾಜ್, ಪ್ರಮುಖರಾದ ವೆಂಕಪ್ಪಗೌಡ, ಕನ್ನಪ್ಪ, ಗಾಮಪ್ಪ, ಅಬ್ದುಲ್ ಗಫಾರ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News