×
Ad

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಕೊಟ್ಪಾ ಕಾಯ್ದೆಯಡಿ ಕ್ರಮ

Update: 2016-04-11 22:12 IST

 ಶಿವಮೊಗ್ಗ, ಎ. 11: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನತಗಳ ಚಿಲ್ಲರೆ ಮಾರಾಟ ಮಾಡುವುದು ಹಾಗೂ ಧೂಮಪಾನ ಮಾಡುವುದನ್ನು ಜಿಲ್ಲಾದ್ಯಂತ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾ ಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದ್ದಾರೆ.
  
ಸೋೀಮವಾರ ಜಿಲ್ಲಾ ತಂಬಾಕು ನಿಯಂತ್ರಣ ಘಟಕವು ತಮ್ಮ ಕಚೇರಿ ಸಭಾಂಗಣದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಕೊಟ್ಪಾ-2003ರ ಪರಿಣಾಮಕಾರಿ ಜಾರಿಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಕಾರ್ಯಾ ಚರಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳ ಚಿಲ್ಲರೆ ಮಾರಾಟ ಮಾಡು ವುದನ್ನು ನಿಷೇಧಿಸಲಾಗಿದೆ. ಶಾಲಾ-ಕಾಲೇಜುಗಳ ಆವರಣಗಳಲ್ಲಿರುವ ಅಂಗಡಿ ಮುಂಗಟ್ಟುಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಮಾಡಿರುವ ಬಗ್ಗೆ ಫಲಕಗಳನ್ನು ಹಾಕದಿರುವುದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ಸೂಚನಾ ಫಲಕಗಳನ್ನು ಹಾಕುವಂತೆ ಅಂಗಡಿಗಳ ಮಾಲಕರಿಗೆ ಸೂಚಿಸಲಾಗಿದೆ. ನಿಯಮವನ್ನು ಮೀರಿ ನಡೆದಲ್ಲಿ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದವರು ತಿಳಿಸಿದರು.
ಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡು ವವರಿಂದ ದಂಡ ವಸೂಲಿ ಮಾಡಿ, ಹಣ ಸಂಗ್ರಹಿ ಸುವುದು ಕಾಯ್ದೆಯ ಉದ್ದೇಶವಲ್ಲ. ಬದಲಾಗಿ ಸಾರ್ವಜನಿಕರ ಧೂಮಪಾನಿಗಳಲ್ಲದವರ ಆರೋಗ್ಯ ರಕ್ಷಿಸುವುದು ಪ್ರಮುಖ ಉದ್ದೇಶವಾಗಿದೆ ಎಂದುಮಾಹಿತಿ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ನಿಯಂತ್ರಣ ಘಟಕದ ಜಿಲ್ಲಾ ನೋಡಲ್ ಅಧಿಕಾರಿ ಡಾ.ಬಿ.ಎಸ್.ಶಂಕರಪ್ಪ ಮಾತನಾಡಿ, ಸೊರಬ ಮತ್ತು ಹೊಸನಗರ ತಾಲೂಕುಗಳನ್ನು ಹೊರತುಪಡಿಸಿ ಉಳಿದೆಲ್ಲಾ ತಾಲೂಕುಗಳಲ್ಲಿ ಮಾರ್ಚ್ 28ರಿಂದ ಎಪ್ರಿಲ್ 2ರವರೆಗೆ ತಂಬಾಕು ನಿಯಂತ್ರಣ ಕಾರ್ಯಾಚರಣೆ ನಡೆಸಿ, 328 ಪ್ರಕರಣಗಳನ್ನು ದಾಖಲಿಸಿಕೊಂಡು 43,090 ರೂ.ಗಳ ದಂಡ ವಿಧಿಸಲಾಗಿದೆ ಎಂದವರು ತಿಳಿಸಿದರು.
ಸಭೆಯಲ್ಲಿ ಮೆಗ್ಗಾನ್ ಆಸ್ಪತ್ರೆಯ ಅಧಿಕ್ಷಕ ಡಾ.ಲೇಪಾಕ್ಷಿ ಸೇರಿದಂತೆ ಶಿಕ್ಷಣ, ಕಂದಾಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News