ಇಂದು ದೇವರ ದಾಸಿಮಯ್ಯ ಜಯಂತಿ
Update: 2016-04-11 23:52 IST
ಉಡುಪಿ, ಎ.11: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ ಸಮಾರಂಭ ಎ.12ರಂದು ಪೂರ್ವಾಹ್ನ 11 ಗಂಟೆಗೆ ಕುಂಜಿಬೆಟ್ಟಿ ನಲ್ಲಿರುವ ಡಾ.ಟಿ.ಎಂ.ಎ. ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಾಸಕ ಪ್ರಮೋದ್ ಮಧ್ವರಾಜ್ ವಹಿ ಸುವರು ಎಂದು ಪ್ರಕಟನೆ ತಿಳಿಸಿದೆ.