×
Ad

ಯಡಿಯೂರಪ್ಪ ಬಿಜೆಪಿ ಅಧ್ಯಕ್ಷ ;ಹೈಕಮಾಂಡ್‌ ನಿರ್ಧಾರಕ್ಕೆ ಜೋಶಿ ಅಪಸ್ವರ

Update: 2016-04-13 10:05 IST

ಬೆಂಗಳೂರು, ಎ.13: ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿಎಸ್ ಯಡಿಯೂರಪ್ಪ  ಅವರನ್ನು ಹೈಕಮಾಂಡ್ ಯಾವುದೇ ಮಾಹಿತಿ ನೀಡದೆ ನೇಮಕ ಮಾಡಿರುವ ಹಿನ್ನೆಲೆಯಲ್ಲಿ ನಿರ್ಗಮನ ಅಧ್ಯಕ್ಷ ಡಾ.ಪ್ರಹ್ಲಾದ್ ಜೋಶಿ ತನ್ನ  ಆಪ್ತರಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ, ಶ್ರೀರಾಮುಲು ಮತ್ತಿತರರು ಪಕ್ಷ ತೊರೆದಾಗ ಡಾ.ಪ್ರಹ್ಲಾದ್ ಜೋಶಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದರು. ಕಳೆದ ಮೂರು ವರ್ಷಗಳಿಂದ ರಾಜ್ಯಾಧ್ಯಕ್ಷರಾಗಿದ್ದ ಜೋಶಿ ಅವರಿಗೆ ಹೈಕಮಾಂಡ್  ಅಧ್ಯಕ್ಷರ ಬದಲಾವಣೆ ಮಾಡುವ ವಿಚಾರದಲ್ಲಿ ಯಾವುದೇ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ
ಏಕಾಏಕಿ ಯಡಿಯೂರಪ್ಪ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವ ವಿಚಾರದಲ್ಲಿ ರಾಜ್ಯ ಬಿಜೆಪಿಯ ಕೆಲವು ನಾಯಕರಿಗೆ ಅಸಮಾಧಾನ ಉಂಟಾಗಿದ್ದರೂ, ಬಹಿರಂಗವಾಗಿ ವ್ಯಕ್ತಪಡಿಸುವ ಕಡೆಗೆ ಅವರು ಗಮನ ಹರಿಸಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News