ಸಾಮಾಜಿಕ ನ್ಯಾಯ ದಿನವಾಗಿ ಅಂಬೇಡ್ಕರ್ ಜಯಂತಿ ಆಚರಣೆ: ಎಸ್‌ಡಿಪಿಐ
ಪುತ್ತೂರು, ಎ.13: ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರ ಜನ್ಮ ದಿನವನ್ನು ಎಸ್‌ಡಿಪಿಐ ಸಾಮಾಜಿಕ ನ್ಯಾಯ ದಿನಾಚರಣೆಯಾಗಿ ಆಚರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಎ.14ರಂದು ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಡಿಪಿಐ ಪುತ್ತೂರು ವಿಧಾನಸಬಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಬೂಬಕರ್ ಸಿದ್ದೀಕ್ ತಿಳಿಸಿದ್ದಾರೆ.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂಬೇಡ್ಕರ್ ದಿನಾಚರಣೆ ಅಂಗವಾಗಿ ಎ.14ರಂದು ಸಂಜೆ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ಪಕ್ಷದ ಕಚೇರಿ ಬಳಿಯಿಂದ ಮೆರವಣಿಗೆ ನಡೆಯಲಿದ್ದು, ಮುಖ್ಯರಸ್ತೆಯಲ್ಲಿ ಸಾಗಿ ಸರಕಾರಿ ಆಸ್ಪತ್ರೆಯ ಬಳಿಯಲ್ಲಿರುವ ಚಿಣ್ಣರ ಪಾರ್ಕ್‌ನಲ್ಲಿ ಸಮಾಪನಗೊಳ್ಳಲಿದೆ. ಬಳಿಕ ಇಲ್ಲಿ ಸಭಾ ಕಾರ್ಯಕ್ರ ನಡೆಯಲಿದೆ. ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಮುಖ್ಯ ಭಾಷಣ ಮಾಡಲಿದ್ದಾರೆ. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್‌ಖಾನ್ ಕೊಡಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಸಮಿತಿಯ ಸದಸ್ಯ ಎಂ.ಕೂಸಪ್ಪ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಹಾಜಿ, ಜೊತೆ ಕಾರ್ಯದರ್ಶಿ ಹಂಝ ಅಫ್ನಾನ್, ಕಬಕ ವಲಯ ಅಧ್ಯಕ್ಷ ಅಬ್ದುರ್ರಹ್ಮಾನ್ ಕೊಡಿಪ್ಪಾಡಿ ಉಪಸ್ಥಿತರಿದ್ದರು.