×
Ad

ಸುಗ್ರೀವಾಜ್ಞೆ ಹೊರಡಿಸಲು ಆಗ್ರಹಿಸಿ ಪರಿಶಿಷ್ಟ ಗುತ್ತಿಗೆದಾರರಿಂದ ಸಚಿವರ ನಿವಾಸಕ್ಕೆ ಮುತ್ತಿಗೆ

Update: 2016-04-13 23:17 IST

ಬೆಂಗಳೂರು, ಎ. 13: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಗುತ್ತಿಗೆದಾರರಿಗೆ ಸರಕಾರಿ ಕಾಮಗಾರಿಗಳಲ್ಲಿ ಮೀಸಲಾತಿ ಕಲ್ಪಿಸಲು ಪಾರದರ್ಶಕ ಕಾಯ್ದೆಗೆ ತಿದ್ದುಪಡಿ ಮತ್ತು ರಿಯಾಯಿತಿ ನೀಡಿ ಸುಗ್ರೀವಾಜ್ಞೆ ಹೊರಡಿಸಲು ಆಗ್ರಹಿಸಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನಿವಾ ಸಕ್ಕೆ ಎಸ್ಸಿ-ಎಸ್ಟಿ ಗುತ್ತಿಗೆದಾರರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ಕುಮಾರಕೃಪಾ ಬಳಿಯಲ್ಲಿನ ಲೋಕೋಪಯೋಗಿ ಸಚಿವ ಡಾ. ಮಹದೇವಪ್ಪ ನಿವಾಸದ ಮುಂದೆ ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವ ಸ್ವಾಮಿ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಿದ ಗುತ್ತಿಗೆದಾರರು, ಸರಕಾರಿ ಕಾಮಗಾರಿಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಲು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹದೇವ ಸ್ವಾಮಿ, ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ ಕಾರ 2013ರಲ್ಲಿ ಸರಕಾರಿ ಕಾಮಗಾರಿ ಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸುವ ಭರವಸೆ ನೀಡಿದ್ದು, ಆಯವ್ಯಯದಲ್ಲಿಯೂ ಘೋಷಣೆ ಮಾಡಿತ್ತು. ಆದರೂ ಈ ವರೆಗೂ ಅನುಷ್ಠಾನಗೊಂಡಿಲ್ಲ ಎಂದು ದೂರಿದರು.
ಪರಿಶಿಷ್ಟರಿಗೆ ಸರಕಾರಿ ಕಾಮಗಾರಿ ಗಳಲ್ಲಿ ಮೀಸಲಾತಿ ಕಲ್ಪಿಸಲು ಪುರೋಹಿತಶಾಹಿ ಅಧಿಕಾರಿ ವರ್ಗ ಅಡ್ಡಿಪಡಿಸುತ್ತಿದೆ. ಸಿದ್ಧರಾಮಯ್ಯಗೆ ಈ ವಿಚಾರದಲ್ಲಿ ಬದ್ಧತೆಯಿದ್ದರೂ ಅನುಷ್ಠಾನವಾಗುತ್ತಿಲ್ಲ. ಅಂಬೇಡ್ಕರ್ ಅವರ 125ನೆ ವರ್ಷಾಚರಣೆ ವೇಳೆಯಲ್ಲಾದರೂ ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಲು ಸರಕಾರ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.
ಸರಕಾರಿ ಕಾಮಗಾರಿಗಳಲ್ಲಿ ಮೀಸ ಲಾತಿ ಮತ್ತು ಟೆಂಡರ್ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳಲು ಪಾರದರ್ಶಕ ಕಾಯ್ದೆಗೆ ತಿದ್ದುಪಡಿ ಸುಗ್ರೀವಾಜ್ಞೆ ಹೊರಡಿಸಿದರೆ ಪರಿಶಿಷ್ಟ ಗುತ್ತಿಗೆದಾರರು ಮತ್ತು ನಿರುದ್ಯೋಗಿ ಯುವಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದ ಅವರು, ಶೋಷಣೆಯ ಸುಳಿಯಲ್ಲಿರುವ ದಲಿತರಿಗೆ ಆರ್ಥಿಕ ಸಬಲತೆ ಸಿಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಧರಣಿನಿರತರು ಸರಕಾರಿ ಕಾಮ ಗಾರಿಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಲು ಸುಗ್ರೀವಾಜ್ಞೆ ಹೊರಡಿಸಲು ಆಗ್ರಹಿಸಿ ಘೋಷಣೆ ಕೂಗಿದರು. ಮುಖಂಡರಾದ ನಾರಾಯಣ ಸ್ವಾಮಿ, ಪುಟ್ಟಸ್ವಾಮಿ, ಮಾದಯ್ಯ, ಓಂಪ್ರಕಾಶ್, ದೊರೆಸ್ವಾಮಿ, ಶಿವಪ್ಪ, ಪರಶಿವಮೂರ್ತಿ, ಶಂಕರ್ ಸೇರಿ ನೂರಕ್ಕೂ ಹೆಚ್ಚು ಗುತ್ತಿಗೆದಾರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News