×
Ad

ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿ ಪ್ರವಾಸ

Update: 2016-04-13 23:20 IST

ಬೆಂಗಳೂರು, ಎ. 13: ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಧ್ಯಯನ ಹಾಗೂ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎ.15ರಿಂದ 18ರ ವರೆಗೆ ನಾಲ್ಕು ದಿನಗಳ ಕಾಲ ಬೀದರ್, ಕಲಬುರಗಿ ಸೇರಿದಂತೆ ಬರಪೀಡಿತ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಸಂಪುಟ ಪುನಾರಚನೆ ಸಂಬಂಧ ಎ.15ರಂದು ಹೊಸದಿಲ್ಲಿ ಪ್ರವಾಸ ಕೈಗೊಳ್ಳಲು ಉದ್ದೇಶಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿಢೀರ್ ತಮ್ಮ ಹೊಸದಿಲ್ಲಿ ಪ್ರಯಾಣ ರದ್ದುಪಡಿಸಿದ್ದಾರೆ. ಅಲ್ಲದೆ, ಬರಪೀಡಿತ ಪ್ರದೇಶಗಳ ಅಧ್ಯಯನಕ್ಕೆ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಗದಗ, ವಿಜಯಪುರ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಬರಪೀಡಿತ ಪ್ರದೇಶಗಳಲ್ಲಿನ ಜನರಿಗೆ ಅಗತ್ಯ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು-ನೀರು ಒದಗಿಸುವ ಸಂಬಂಧ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News