×
Ad

ಕೆಂಜಾರು: ಶ್ರೀದೇವಿ ಕಾಲೇಜಿನ ವಾರ್ಷಿಕೋತ್ಸವ

Update: 2016-04-13 23:49 IST

ಮಂಗಳೂರು, ಎ.13: ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಜಿ ನಿಯರಿಂಗ್ ವಿದ್ಯಾ ರ್ಥಿಗಳಿಗೆ ವಿವಿಧ ರೀತಿಯ ಉದ್ಯೋಗ ಅವಕಾಶಗಳು ದೊರೆಯುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಶ್ರೇಯಸ್ಸನ್ನು ಹೊಂದಲು ತಮ್ಮದೇ ಆದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಜೆ.ಟಿ. ರಾಧಾಕೃಷ್ಣ ನುಡಿದರು.

ಕೆಂಜಾರಿನಲ್ಲಿರುವ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿ ಕೋತ್ಸವದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೆನರಾ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಮೂರೂರ್ ರಾಮ್‌ಮೋಹನ್ ಪೈ ಮುಖ್ಯ ಅತಿಥಿ ಯಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ದಿಲೀಪ್ ಕುಮಾರ್ ವರದಿ ವಾಚಿಸಿದರು.

 ಈ ಸಂದರ್ಭ ಮೆಕಾನಿಕಲ್ ವಿಭಾಗದ ವಿದ್ಯಾರ್ಥಿ ಇಚ್ಛಾಂಗಿ ಮುಹಮ್ಮದ್ ರಫಿಗೆ ಡಾ.ಬಿ.ಆರ್.ಸಾಮಗ ಪ್ರಶಸ್ತಿ ನೀಡಿ ಗೌರವಿಸಲಾ ಯಿತು. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ನಿಧೀಶ್ ಎಸ್. ಶೆಟ್ಟಿ, ಕಾರ್ಯದರ್ಶಿ ಮೈನಾ ಎಸ್ ಶೆಟ್ಟಿ, ಟ್ರಸ್ಟಿ ಪ್ರಿಯಾಂಕಾ ಎನ್. ಶೆಟ್ಟಿ, ಕಾರ್ಯ ಕ್ರಮ ಸಂಯೋಜಕಿ ಚಿತ್ರಾ ಪ್ರಭು ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ಸಿವಿಲ್ ವಿಭಾಗದ ವಿದ್ಯಾರ್ಥಿನಿ ಜಸ್ಟಿನ್ ಡಾರಿಲ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News