×
Ad

ಶಾಂತಿನಗರ: ಕರಕುಶಲ ತರಬೇತಿ ಶಿಬಿರ

Update: 2016-04-13 23:50 IST

ಉಪ್ಪಿನಂಗಡಿ, ಎ.13: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳುವುದರಿಂದ ಮುಂದಿನ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲು ಸಾಧ್ಯ ಎಂದು ಶಾಂತಿನಗರ ಸರಕಾರಿ ಪ್ರೌಢಶಾಲೆಯ ಕಾರ್ಯಾಧ್ಯಕ್ಷ ಮುರಳೀಧರ ತಿಳಿಸಿ ದರು. ಉಪ್ಪಿನಂಗಡಿಯ ವರ್ತಕರ ಸಂಘ ಹಾಗೂ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಜಂಟಿ ಆಶ್ರಯ ದಲ್ಲಿ ಶಾಂತಿನಗರದ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕರಕುಶಲ ತರಬೇತಿ ಶಿಬಿರ ಮತ್ತು ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವರ್ತಕರ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ, ವರ್ತಕರ ಸಂಘದ ಕಾರ್ಯ ದರ್ಶಿ ಅಬ್ದುರ್ರಹ್ಮಾನ್ ಯುನಿಕ್ ಮಾತನಾಡಿದರು. ವೇದಿಕೆಯಲ್ಲಿ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಪ್ರಾಂಶುಪಾಲೆ ಮೇರಿ ಬಿ.ಸಿ., ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ನವ್ಯಾ, ವರ್ತಕರ ಸಂಘದ ಮಾಜಿ ಅಧ್ಯಕ್ಷ ಯು.ಜಿ.ರಾಧಾ, ಝಕಾರಿಯಾ ಕೊಡಿಪ್ಪಾಡಿ ಉಪಸ್ಥಿತರಿದ್ದರು. ನಿವೃತ್ತ ಚಿತ್ರಕಲಾ ಶಿಕ್ಷಕ ಪುರು ಷೋತ್ತಮ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿದರು. ವಿದ್ಯಾ ರ್ಥಿನಿಯರಾದ ಪ್ರಜ್ಞಾ ಸ್ವಾಗತಿಸಿದರು. ಮಧುರಾ ವಂದಿಸಿದರು. ಆಶಾಲತಾ ಮತ್ತು ಫಾಯಿಝಾ ಬಾನು ಕಾರ್ಯ ಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News