ಎ.24ರಂದು ಬಿಲ್ಲವ ಭವನ ಉದ್ಘಾಟನೆ

Update: 2016-04-13 18:46 GMT

ಬೆಂಗಳೂರು,ಎ.13: ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲ್ಲವ ಅಸೋಸಿಯೇಷನ್ ಆವರಣದಲ್ಲಿ ನಿರ್ಮಾಣ ಮಾಡಿರುವ ಬಿಲ್ಲವ ಭವನವನ್ನು ಎ.24 ಕ್ಕೆ ಉದ್ಘಾಟನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ವೇದಕುಮಾರ್ ತಿಳಿಸಿದ್ದಾರೆ.
ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಹಲವಾರು ಗಣ್ಯರು ಭಾಗವಹಿಸಲಿದ್ದಾರೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News