×
Ad

ಕಾಸರಗೋಡು: ನೀರಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Update: 2016-04-14 23:41 IST

ಕಾಸರಗೋಡು, ಎ.14: ಅಣೆಕಟ್ಟಿನಲ್ಲಿ ಸ್ನಾನಕ್ಕೆಂದು ನೀರಿಗಿಳಿದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮುಳುಗಿ ಮೃತಪಟ್ಟ ಘಟನೆ ಕುತ್ತಿಕೋಲ್ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ.

      ರಾಜಪುರ ಬಲಾಲ್‌ನ ಜವ್ವರ್ (22) ಮೃತ ವಿದ್ಯಾರ್ಥಿ. ಈತ ಸ್ನೇಹಿತರ ಜೊತೆ ಅಣೆಕಟ್ಟಿಗೆ ಸ್ನಾನಕ್ಕಿಳಿದಿದ್ದು, ಈ ವೇಳೆ ನೀರಲ್ಲಿ ಮುಳುಗಿದ್ದು, ಜೊತೆಗಿದ್ದವರು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ವಿದ್ಯಾರ್ಥಿಗಳ ಬೊಬ್ಬೆ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಈತನನ್ನು ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಾಗಲೇ ಜವ್ವರ್ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News