×
Ad

ಯು. ಕೃಷ್ಣಮೂರ್ತಿ ನಾವಡ

Update: 2016-04-14 23:47 IST

 ಪಡುಬಿದ್ರೆ, ಎ.14: ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಯು.ಕೃಷ್ಣಮೂರ್ತಿ ನಾವಡ (ಗಾರ್ಡನ್ ಮಾಸ್ಟರ್) (80) ಅನಾರೋಗ್ಯದಿಂದ ಬುಧವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಸುಮಾರು 3 ದಶಕಕ್ಕೂ ಅಧಿಕ ಕಾಲ ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಗಣಿತ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ನಾವಡರು, ಗಾರ್ಡನ್ ಮಾಸ್ಟರ್ ಎಂದೇ ಕರೆಯಲ್ಪಡುತ್ತಿದ್ದರು. ಕೃಷಿಕರಾಗಿದ್ದ ಅವರು ಪ್ರಾಯೋಗಿಕ ಕೃಷಿಯಲ್ಲಿ ಪ್ರಾವೀಣ್ಯತೆ ಹೊಂದಿದ್ದರು. ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಬ್ರಹ್ಮಕಲಶ ಸಮಿತಿಯ ಗೌರವಾಧ್ಯಕ್ಷ, ಸರಸ್ವತಿ ಮಂದಿರ ಶಾಲಾಭಿವೃದ್ಧಿ ಮಂಡಳಿಯ ಸದಸ್ಯ ಮತ್ತು ಸಂಚಾಲಕರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News