×
Ad

ಇಂದ್ರಾಳಿಯ ಯಕ್ಷಗಾನ ಕೇಂದ್ರದ ವಾರ್ಷಿಕೋತ್ಸವ

Update: 2016-04-15 23:22 IST

ಉಡುಪಿ, ಎ.15: ಯಕ್ಷಗಾನ ಕಲೆಯು ಕರ್ನಾಟಕ ರಾಜ್ಯದ ಕಲೆಯಾಗಬೇಕಾಗಿದೆ. ಇದಕ್ಕೆ ರಾಜಕೀಯ ಒತ್ತಡ ಹಾಗೂ ಅಭಿಮಾನಿಗಳ ಪ್ರೀತಿ ವಿಶ್ವಾಸ ಅತೀ ಅಗತ್ಯವಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹೇಳಿದ್ದಾರೆ.
ಉಡುಪಿ ಎಂಜಿಎಂ ಕಾಲೇಜು, ಮಣಿಪಾಲ ಅಕಾಡಮಿ ಅಫ್ ಜನರಲ್ ಎಜುಕೇಶನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾದ ಉಡುಪಿ ಇಂದ್ರಾಳಿಯ ಯಕ್ಷಗಾನ ಕೇಂದ್ರದ ಮೂರು ದಿನಗಳ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮುಖ್ಯ ಅತಿಥಿಗಳಾಗಿ ಉದ್ಯಮಿ ವಿಶ್ವನಾಥ ಶೆಣೈ, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ, ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕುಸುಮಾ ಕಾಮತ್ ಉಪಸ್ಥಿತರಿದ್ದರು. ಕೇಂದ್ರದ ನಿರ್ದೇಶಕ ಪ್ರೊ.ಹೆರಂಜೆ ಕೃಷ್ಣ ಭಟ್ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News