×
Ad

ಉಪ್ಪಿನಂಗಡಿ: ಮನೆಗೆ ಸಿಡಿಲು ಬಡಿದು ಇಬ್ಬರಿಗೆ ಗಾಯ, ವಿದ್ಯುತ್ ಉಪಕರಣಗಳಿಗೆ ಹಾನಿ

Update: 2016-04-16 18:53 IST

ಉಪ್ಪಿನಂಗಡಿ: ಕೋಡಿಂಬಾಡಿ ಗ್ರಾಮದ ಚೀಮುಳ್ಳು ಎಂಬಲ್ಲಿ ಮನೆಗೆ ಸಿಡಿಲು ಬಡಿದು ಇಬ್ಬರು ಗಾಯಗೊಂಡು, ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾದ ಘಟನೆ ಶನಿವಾರ ನಸುಕಿನ ಜಾವ ನಡೆದಿದೆ.

ಚೀಮುಳ್ಳು ದಿ.ಮೋಂಟ ಮೇರ ಎಂಬವರ ಪತ್ನಿ ಮಾಣಿಗರವರ ಮನೆಗೆ ಸಿಡಿಲು ಬಡಿದಿದ್ದು, ಮನೆಯೊಳಗಿದ್ದ ಮಾಣಿಗರವರ ಪುತ್ರ ಮಾಧವ ಹಾಗೂ ಮಾಧವರ ಪತ್ನಿ ಧನ್ಯಶ್ರೀಯವರಿಗೆ ಅಲ್ಪಸ್ವಲ್ಪ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸಿಡಿಲಿನ ತೀವ್ರತೆಗೆ ಟಿವಿ ಹಾಗೂ ಇತರ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಸದಸ್ಯ ಜಗನ್ನಾಥ ಶೆಟ್ಟಿ ನಡುಮನೆರವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News