ಬಿಆರ್‌ಪಿ/ಸಿಆರ್‌ಪಿ ಹುದ್ದೆಗೆ ಕೌನ್ಸ್ಸೆಲಿಂಗ್
Update: 2016-04-17 00:16 IST
ಉಡುಪಿ, ಎ.16: ಜಿಲ್ಲೆಯಲ್ಲಿ ಖಾಲಿ ಇರುವ ಬಿಆರ್‌ಪಿ/ಸಿಆರ್‌ಪಿ ಹುದ್ದೆ ಗಳನ್ನು ಭರ್ತಿ ಮಾಡಲು ಮಾ.27 ರಂದು ನಡೆದ ಲಿಖಿತ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಆದ್ಯತಾ ಪಟ್ಟಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪ ಗಳಿದ್ದಲ್ಲಿ ಎ.20ರೊಳಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಲ್ಲಿಸಬಹುದಾಗಿದೆ. ಎ.29ರಂದು ಮಣಿಪಾಲದಲ್ಲಿರುವ ಉಪನಿರ್ದೇಶಕರ ಕಚೇರಿಯಲ್ಲಿ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.