ರಾಮಲ್‌ಕಟ್ಟೆಯಲ್ಲಿ ಬೈಕ್‌ಗಳ ನಡುವೆ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಾಯ
ಬಂಟ್ವಾಳ, ಎ.17: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ತುಂಬೆ ಸಮೀಪದ ರಾಮಲ್‌ಕಟ್ಟೆ ಎಂಬಲ್ಲಿ ರವಿವಾರ ನಡೆದಿದೆ. ರಾಮಲ್‌ಕಟ್ಟೆ ನಿವಾಸಿ ಹುಸೈನ್ ಹಾಜಿ(75) ಮೃತಪಟ್ಟವರು. ಅವರ ಪುತ್ರ ಖಾದರ್ ಹಾಗೂ ತುಂಬೆ ನಿವಾಸಿ ಇಬ್ರಾಹೀಂ ಎಂಬವರು ಗಾಯಗೊಂಡಿದ್ದಾರೆ. ಹುಸೈನ್ ಹಾಜಿ ಹಾಗೂ ಖಾದರ್ ಸಂಚರಿಸುತ್ತಿದ್ದ ಬೈಕ್ ರಸ್ತೆ ದಾಟಲು ರಸ್ತೆ ವಿಭಜಕದ ಬಳಿ ನಿಂತಿದ್ದ ವೇಳೆ ತುಂಬೆ ಕಡೆಯಿಂದ ಇಬ್ರಾಹೀಂ ಚಲಾಯಿಸಿಕೊಂಡು ಬಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದ ರಭಸಕ್ಕೆ ಬೈಕ್‌ನಲ್ಲಿದ್ದ ಹುಸೈನ್ ಹಾಜಿ ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ಅವರ ತಲೆಗೆ ತೀವ್ರ ಸರೂಪದ ಗಾಯಗಳಾಗಿದ್ದವು. ತಕ್ಷಣ ಸ್ಥಳೀಯರು ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು, ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುಗಳ ಪೈಕಿ ಖಾದರ್‌ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಗಾಯಾಳು ಇಬ್ರಾಹೀಂ ತುಂಬೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬಂಟ್ವಾಳ ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ