ಮೊಂಟೆಪದವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ
Update: 2016-04-17 16:40 IST
ಕೊಣಾಜೆ: ನರಿಂಗಾನ ಗ್ರಾಮದ ಮೊಂಟೆಪದವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಾಗಾರ ಶುಕ್ರವಾರ ನಡೆಯಿತು.
ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಅರಿವಳಿಕೆಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಶ್ರೀಪಾದ ಮೆಹಂದೆಳೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸ್ಕೌಟ್ ಶಿಕ್ಷಕ ತ್ಯಾಗಂ ಅವರ ಮಾರ್ಗದರ್ಶನದಲ್ಲಿ ನಡೆದ ಶಿಬಿರದಲ್ಲಿ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಬಂಟ್ವಾಳ ತಾಲೂಕುಗಳ ಸುಮಾರು 83 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗೈಡ್ಸ್ ಕ್ಯಾಪ್ಟನ್ ಪ್ಲೇವಿ ಡಿಸೋಜ ಸ್ವಾಗತಿಸಿದರು.