ಡಿವೈಡರ್‌ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು

Update: 2016-04-17 18:46 GMT

ಬ್ರಹ್ಮಾವರ, ಎ.17: ಇಲ್ಲಿಗೆ ಸಮೀಪದ ಕೆ.ಜಿ.ರೋಡ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.

    ಮೃತರನ್ನು ಮಂಗಳೂರು ಬಿಜೈ ನ್ಯೂ ರೋಡ್ ನಿವಾಸಿ ಸುಕುಮಾರ್ ಆಚಾರ್ಯ ಎಂಬವರ ಮಗ ಅಭಿರಾಮ್ ಆಚಾರ್ಯ(28) ಎಂದು ಗುರುತಿಸಲಾಗಿದೆ. ಇವರು ಎ.15ರಂದು ಅಪರಾಹ್ನ ವೇಳೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಎ.17ರಂದು ಬೆಳಗಿನ ಜಾವ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News