ಬದಿಯಡ್ಕ: ಬಾವಿಗೆ ಬಿದ್ದು ಕಾರ್ಮಿಕ ಮೃತ್ಯು
Update: 2016-04-18 14:21 IST
ಕಾಸರಗೋಡು, ಎ.18: ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬದಿಯಡ್ಕ ಸಮೀಪದ ಮವ್ವಾರ್ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಕೃಷ್ಣ (35) ಎಂದು ಗುರುತಿಸಲಾಗಿದೆ. ಖಾಸಗಿ ವ್ಯಕ್ತಿಯೋರ್ವರ ಬಾವಿ ಕೆಲಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬಾವಿಗೆ ಇಳಿಯುತ್ತಿದ್ದಾಗ ಕೆಳಗೆ ಬಿದ್ದ ಇವರನ್ನು ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಮೇಲಕ್ಕೆತ್ತಿದರೂ ಅಷ್ಟರಲ್ಲಿ ಮೃತಪಟ್ಟಿದ್ದರು ಎಂದು ಹೇಳಲಾಗಿದೆ..
ಈ ಬಗ್ಗೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.