ಬೆಳ್ತಂಗಡಿ: ಬಾವಿಗೆ ಹಾರಿ ಆತ್ಮಹತ್ಯೆ
Update: 2016-04-18 19:34 IST
ಬೆಳ್ತಂಗಡಿ: ಉಜಿರೆ ಗ್ರಾಮದ ನಿವಾಸಿ ಗಣಪತಿ ಪ್ರಬು ಎಂಬವರ ಪತ್ನಿ ರೂಪಾ ಪ್ರಭು (58) ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಈಕೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈಕೆಯ ಪುತ್ರ ಅಶ್ವಿನ್ ಪ್ರಭು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.