ಸುರತ್ಕಲ್: ಬಸ್-ಬೈಕ್ ಡಿಕ್ಕಿ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯ
Update: 2016-04-18 21:02 IST
ಸುರತ್ಕಲ್, ಎ.18: ಎಕ್ಸ್ ಪ್ರಸ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಸಹೋದರ ಬೈಕ್ ಸವಾರರಿಬ್ಬರಿ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕದಲ್ಲಿ ನಡೆದಿದೆ. ಹಳೆಯಂಗಡಿ ಇಂದಿರಾ ನಗರ ನಿವಾಸಿಗಳಾದ ಫೈಝಲ್ ಮತ್ತು ಆತನ ಸಹೋದರ ಫರ್ಹಾನ್ ಎಂದು ತಿಳಿದು ಬಂದಿದೆ.
ಸಹೋದರರಿಬ್ಬರು ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ವೇಳೆ ಅತಿವೇಗದಿಂದ ಬಂದ ಪೆರೇರಾ ಹೆಸರಿನ ಎಕ್ಸ್ ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ತಲೆ ಹಾಗೂ ದೇಹದ ಭಾಗಗಳಿಗೆ ಗಂಭೀರ ಗಾಯಗಳಾಗಿತ್ತು ಎಂದು ತಿಳಿದು ಬಂದಿದೆ.
ತಕ್ಷಣ ಸ್ಥಳೀಯರು ಸಮೀಪದ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಸಂಭಂಧ ಮಂಗಳೂರು ಉತ್ತರವಲಯ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.