ಮೌಲ್ಯಮಾಪನಕ್ಕೆ ಹಾಜರಾಗದಿದ್ದರೆ ಕ್ರಿಮಿನಲ್ ಮೊಕದ್ದಮೆ: ಕಿಮ್ಮನೆ
Update: 2016-04-18 22:55 IST
ಬೆಂಗಳೂರು, ಎ.18: ರಾಜ್ಯ ಸರಕಾರ ತನ್ನ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದೆ. ಹೀಗಾಗಿ ಉಪನ್ಯಾಸಕರು ಪ್ರತಿಭಟನೆ ಕೈಬಿಟ್ಟು ಮೌಲ್ಯ ಮಾಪನಕ್ಕೆ ಹಾಜರಾಗದಿದ್ದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಎಚ್ಚರಿಸಿದ್ದಾರೆ.
ಸೋಮವಾರ ಮಲ್ಲೇಶ್ವರಂನಲ್ಲಿರುವ ಪದವಿಪೂರ್ವ ಶಿಕ್ಷಣ ಮಂಡಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಯಾವುದೇ ಕಾರಣಕ್ಕೂ ತನ್ನ ನಿಲುವು ಬದಲಿಸುವುದಿಲ್ಲ. ಮೌಲ್ಯಮಾಪನಕ್ಕೆ ಹಾಜರಾಗದಿದ್ದರೆ ಉಪನ್ಯಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೇಟು ಹಾಕುವುದಿಲ್ಲ ಎಂದರು.