×
Ad

ಮುಖ್ಯಮಂತ್ರಿಗೆ ‘ಬರ’ದ ವಾಸ್ತವ ಸ್ಥಿತಿ ಅರ್ಥವಾಗುತ್ತಿಲ್ಲ: ಬಿಎಸ್‌ವೈ

Update: 2016-04-18 23:44 IST

ಬೆಂಗಳೂರು, ಎ.18: ಮುಖ್ಯಮಂತ್ರಿ ಸಿದ್ದರಾಮಯ್ಯ ಹೋದಕಡೆಯೆಲ್ಲ ಸಾಮಾನ್ಯ ಜನರು, ರೈತರು ೇರಾವ್ ಹಾಕುತ್ತಿದ್ದಾರೆ. ಅವರಿಗೆ ರಾಜ್ಯದಲ್ಲಿರುವ ಬರದ ವಾಸ್ತವ ಸ್ಥಿತಿ ಅರ್ಥವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ಮಲ್ಲೇಶ್ವರಂನಲ್ಲಿ ರುವ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮೈಸೂರು, ಮೈಸೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳ ಮುಖಂಡರ ಸಭೆಗೂ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಯಾವುದೆ ಸಚಿವರು ಬರ ಪ್ರವಾಸ ಮಾಡುತ್ತಿಲ್ಲ. ರಾಜ್ಯದಲ್ಲಿ ಸರಕಾರ ಇದ್ದರೂ ಸತ್ತಂತಿದೆ. ಆದುದರಿಂದ, ಜನರು ಮುಖ್ಯಮಂತ್ರಿ ವಿರುದ್ಧ ಈ ರೀತಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ಎ.27ರಿಂದ ಪ್ರವಾಸ:  ರಾಜ್ಯದಲ್ಲಿನ ಭೀಕರ ಬರಪರಿಸ್ಥಿತಿಯ ಬಗ್ಗೆ ಎ.27ರಿಂದ ಬರ ಅಧ್ಯಯನ ಪ್ರವಾಸ ಕೈಗೊಳ್ಳುತ್ತೇನೆ. ಅಲ್ಲದೆ, ಬರಪರಿಹಾರಕ್ಕಾಗಿ ಮತ್ತಷ್ಟು ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರವನ್ನು ಒತ್ತಾಯಿಸಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News