×
Ad

ರಮೇಶ ಪೂಜಾರಿ

Update: 2016-04-19 00:08 IST

 ಉಪ್ಪಿನಂಗಡಿ, ಎ.18: ಇಲ್ಲಿನ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ, ಪುಳಿತ್ತಡಿಯ ಗೌಂಡತ್ತಿಗೆ ನಿವಾಸಿ ರಮೇಶ್ ಪೂಜಾರಿ(55) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾಗಿದ್ದಾರೆ.

 ಎರಡು ದಿನಗಳ ಹಿಂದೆ ಬ್ರೈನ್ ಹೆಮರೇಜ್‌ಗೆ ತುತ್ತಾಗಿದ್ದ ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು 24 ವರ್ಷಗಳಿಂದ ಉಪ್ಪಿನಂಗಡಿಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿದ್ದರಲ್ಲದೆ, ಒಂದು ಬಾರಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News