×
Ad

ಮಂಗಳೂರು : ಬರಪೀಡಿತ ಜಿಲ್ಲೆಗಳಲ್ಲಿ ಆರೋಗ್ಯ ಅಧ್ಯಯನಕ್ಕೆ ಪ್ರತ್ಯೇಕ ತಂಡ: ಸಚಿವ ಖಾದರ್

Update: 2016-04-19 17:28 IST

ಮಂಗಳೂರು, ಎ. 19: ರಾಜ್ಯದಲ್ಲಿ ಬರಪೀಡಿತ ಜಿಲ್ಲೆಗಳಲ್ಲಿ ಜನತೆಯ ಆರೋಗ್ಯದ ಮೇಲಿನ ದುಷ್ಪರಿಣಾಮ ಅಧ್ಯಯನಕ್ಕೆ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳವಾರ ಮಂಗಳೂರಿನಲ್ಲಿ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಬರಪೀಡಿತ ಜಿಲ್ಲೆಗಳಲ್ಲಿ ಬಿಸಿಲ ಬೇಗೆಯಿಂದ ಜನತೆ ಕಂಗಾಲಾಗಿದ್ದಾರೆ. ಇದು ಜನರ ಆರೋಗ್ಯ ಏರುಪೇರಿಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಆರೋಗ್ಯ ಇಲಾಖೆಯಿಂದ ಅಧ್ಯಯನಕ್ಕೆ ತಂಡ ರಚಿಸಲಾಗಿದೆ.
ಒಂದು ತಂಡ ನನ್ನ ನೇತೃತ್ವದಲ್ಲಿ ಹಾಗೂ ಇನ್ನೊಂದು ತಂಡ ಇಲಾಖೆಯ ಮುಖ್ಯ ಕಾರ್ಯದರ್ಶಿಯ ನೇತೃತ್ವದಲ್ಲಿ ರಚಿಸಲಾಗಿದೆ. ಈ ತಂಡ ಬರಪೀಡಿತ ಜಿಲ್ಲೆಗಳ ಜನರ ಆರೋಗ್ಯದ ಪರಿಸ್ಥಿತಿಯ ಅವಲೋಕನ ನಡೆಸಲಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News