ರಣರಂಗವಾದ ಬೆಂಗಳೂರು
Update: 2016-04-19 20:22 IST
ಬೆಂಗಳೂರು: ಕೇಂದ್ರದ ನೂತನ ಭವಿಷ್ಯ ನಿಧಿ(ಪಿಎಫ್) ನೀತಿಯನ್ನು ವಿರೋಧಿಸಿ ಸಿದ್ಧ ಉಡುಪು ಕಾರ್ಖಾನೆಯ ಸಾವಿರಾರು ಕಾರ್ಮಿಕರ ಆಕ್ರೋಶದ ಕಟ್ಟೆಯೊಡೆದಿದೆ. ಇಲ್ಲಿನ ಹೊಸೂರು ರಸ್ತೆಯ ಹೆಬ್ಬಗೋಡಿ, ಬನ್ನೇರುಘಟ್ಟ ರಸ್ತೆ, ಮೈಸೂರು ರಸ್ತೆ, ತುಮಕೂರು ರಸ್ತೆ ಸೇರಿದಂತೆ ನಗರದ ವಿವಿಧೆಡೆ ಕಾರ್ಮಿಕರು ಬೀದಿಗಿಳಿದ ಹಿನ್ನೆಲೆಯಲ್ಲಿ ಉದ್ಯಾನನಗರಿ ಬೆಂಗಳೂರು ಅಕ್ಷರಶಃ ಸ್ತಬ್ಧವಾಗಿತ್ತು. ಸಿದ್ಧ ಉಡುಪು ಕಾರ್ಖಾನೆಗಳ ಕಾರ್ಮಿಕರ ಪ್ರತಿಭಟನೆ, ಧರಣಿ ಸತ್ಯಾಗ್ರಹ, ರಸ್ತೆ ತಡೆ, ಪೊಲೀಸರ ಲಾಠಿ ಪ್ರಹಾರ, ಹಿಂಸಾಚಾರ, ವಾಹನಗಳಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ನಗರದಲ್ಲಿ ಪರಿಸ್ಥಿತಿ ಸಂಪೂರ್ಣ ಉದ್ವಿಗ್ನಗೊಂಡಿತ್ತು. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಇಬ್ಬರು ಕಾರ್ಮಿಕರಿಗೆ ಗುಂಡು ತಗಲಿದ ಘಟನೆಯೂ ನಡೆದಿದ್ದು, ಇದಕ್ಕೆ ಸಂಬಂಧಿಸಿದ ಚಿತ್ರಗಳು ಇಲ್ಲಿವೆ.