×
Ad

ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Update: 2016-04-20 23:48 IST

ಬೆಂಗಳೂರು,ಎ.20: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಬ್ಯಾಂಕ್ ಸಹಯೋಗದೊಂದಿಗೆ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ ಸಹಾಯ ಧನಕ್ಕಾಗಿ ಅರ್ಜಿಗಳು ಆಹ್ವಾನಿಸಲಾಗಿದೆ.

ಹೈನುಗಾರಿಕೆಗೆ ರೂ.1 ಲಕ್ಷದವರೆಗೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಮತ್ತು ವಾಹನ, ವ್ಯಾಪಾರ, ಕಿರು ಕೈಗಾರಿಕೆಗಳಿಗೆ ರೂ.1ಲಕ್ಷಕ್ಕೂ ಮೇಲ್ಪಟ್ಟು ಮತ್ತು ನಿಗಮದಿಂದ ನೇರವಾಗಿ ಮೈಕ್ರೋ ಫೈನಾನ್ಸ್, ಕಿರುಸಾಲ ಯೋಜನೆಗಳಾದ ಅಂಗವಿಕಲರ ಪುನರ್ವಸತಿ ಯೋಜನೆ, ಭೂ ಒಡೆತನ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್‌ಗಳನ್ನು ತೋರಿಸಿ ಅರ್ಜಿಯನ್ನು ಉಚಿತವಾಗಿ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮೇ 16ರೊಳಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಗ್ರಾಮಾಂತರ ಜಿಲ್ಲೆ, 4ನೆ ಮುಖ್ಯ ರಸ್ತೆ, 16ನೆ ಅಡ್ಡ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹಿಂದಿನ ವರ್ಷ ಅರ್ಜಿ ಸಲ್ಲಿಸಿ, ಸವಲತ್ತು ಪಡೆಯದ ಅರ್ಜಿದಾರರು ಮರು ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸಂಬಂಧಿಸಿದ ತಾಲೂಕು ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News