×
Ad

ಕಾಸರಗೋಡು ಪೊಲೀಸ್ ಇಲಾಖೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವೇ ಕಳವು!

Update: 2016-04-21 12:19 IST

ಕಾಸರಗೋಡು, ಎ.21: ಸೂಕ್ಷ್ಮಪ್ರದೇಶ ಎಂದು ಗುರುತಿಸಲ್ಪಟ್ಟಿರುವ ಕಾಸರಗೋಡು ಜಿಲ್ಲೆಯ ವಿವಿಧೆಡೆಗಳಲ್ಲಿ ತೀವ್ರ ನಿಗಾ ಇರಿಸುವ ಉದ್ದೇಶದಿಂದ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಒಂದು ಕಳವಾಗಿರವುಗು ವರದಿಯಾಗಿದೆ.
ಜಿಲ್ಲೆಯ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ 83 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು ಈ ಪೈಕಿ ಒಂದು ನಾಪತ್ತೆಯಾಗಿರುವುದು ಸಾಕಷ್ಟು ಸಂಶಯಕ್ಕೆ ಕಾರಣವಾಗಿದೆ.
 ಜಿಲ್ಲೆಯ ಎರಡು ಪೊಲೀಸ್ ಉಪ ವಿಭಾಗೀಯ ಕಚೇರಿ ವ್ಯಾಪ್ತಿಯಲ್ಲಿ 83 ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಪ್ರಸ್ತುತ ಈ ಪೈಕಿ 14 ಕ್ಯಾಮೆರಾಗಳು ಕಾರ್ಯಾಚರಿಸುತ್ತಿಲ್ಲ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News