ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ರದ್ದು ನೈನಿತಾಲ್ ಹೈಕೋರ್ಟ್‌ನ ಮಹತ್ವದ ತೀರ್ಪು
Update: 2016-04-21 16:20 IST
ಕೇಂದ್ರಕ್ಕೆ ತೀವ್ರ ಮುಖಭಂಗ
ಡೆಹ್ರಾಡೂನ್, ಎ.21: ಉತ್ತರಾಖಂಡದಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಡಳಿತವನ್ನು ರದ್ದುಪಡಿಸಿರುವ ನೈನಿತಾಲ್ ಹೈಕೋರ್ಟ್, ಬಂಡಾಯ ಎದ್ದಿರುವ 9 ಕಾಂಗ್ರೆಸ್ ಶಾಸಕರ ಸದಸ್ಯತ್ವವನ್ನು ರದ್ದುಪಡಿಸಿ ಮಹತ್ವದ ತೀರ್ಪು ನೀಡಿದೆ.
ಹೈಕೋರ್ಟ್‌ನ ಈ ಮಹತ್ತರ ತೀರ್ಪಿನಿಂದಾಗಿ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗವಾಗಿದ್ದು, ಕಾಂಗ್ರೆಸ್ ಭಾರೀ ಜಯ ಸಾಧಿಸಿದೆ.
ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಹರೀಶ್ ರಾವತ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಮೂಲಕ ಸಾಂವಿಧಾನಿಕ ಪಾಪ ಮಾಡಲಾಗಿದೆ ಎಂದಿದೆ. ಏ.29ಕ್ಕೆ ಬಹುಮತ ಸಾಬೀತು ಪಡಿಸಲು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಅವಕಾಶ ಕಲ್ಪಿಸಿದೆ.
ಇದು ರಾವತ್ ಗೆಲುವಲ್ಲ, ಪ್ರಜಾಪ್ರಭುತ್ವದ ಗೆಲುವು. ನಾವು ಬಹುಮತ ಸಾಬೀತುಪಡಿಸಲು ಸಿದ್ಧ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.