5 ವರ್ಷಗಳಲ್ಲಿ ಕಾವೇರಿ ನದಿ ಬರಿದು

Update: 2016-04-21 16:23 GMT

ಮಡಿಕೇರಿ,ಎ.21: ಮರಳು ಸಾಗಣೆ ಸಂಬಂಧ ಜಿಪಿಎಸ್ ಅಳವಡಿಸಿ ನಿಯಮ ಪಾಲಿಸದಿರುವ ವಾಹನಗಳ ಪರವಾನಿಗೆಯನ್ನು ರದ್ದುಪಡಿಸಲು ಅಗತ್ಯ ತುರ್ತು ಕ್ರಮಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞ್ಞಾನ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತು ಗುರುವಾರ ನಡೆದ ಟಾಸ್ಕ್‌ಪೋರ್ಸ್ ಸಮಿತಿ ಸಭೆೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮರಳು ಸಾಗಣೆಗೆ ಸಂಬಂಧಿಸಿದಂತೆ ಜಿಪಿಎಸ್ ಅಳವಡಿಸಿರುವ ವಾಹನಗಳಿಂದ ಅನಧಿಕೃತವಾಗಿ ಮರಳು ಸಾಗಣೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಇಂತಹ ನಿಯಮ ಉಲ್ಲಂಘಿಸಿದ ವಾಹನಗಳ ಪರವಾನಿಗೆಯನ್ನು ಕೂಡಲೇ ರದ್ದುಪಡಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಮರಳು ಸಾಗಣೆಯಾಗುವ ಪ್ರದೇಶಗಳಲ್ಲಿ ಸಿಸಿ ಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಜೊತೆಗೆ ಎಷ್ಟು ಲಾರಿಗಳಲ್ಲಿ ಮರಳು ಸಾಗಣೆೆಯಾಗುತ್ತಿದೆ ಎಂಬ ಬಗ್ಗೆ ಪ್ರತಿನಿತ್ಯ ಮಾಹಿತಿ ಲಭ್ಯವಾಗಬೇಕು. ಆ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರು ಮಾತನಾಡಿ, ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಲಹೆ ಪಡೆದು ಮರಳು ಲಾರಿಗಳು ಓಡಾಡುವ ನಿರ್ದಿಷ್ಟ ಸ್ಥಳದಲ್ಲಿ ಸಿಸಿ ಟಿವಿಯನ್ನು ಅಳವಡಿಸುವಂತೆ ಸಲಹೆ ನೀಡಿದರು. ಸಿಸಿ ಟಿವಿ ಒಡೆದು ಹಾಕುವುದು ಕಂಡುಬಂದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಎಚ್ಚರಿಕೆ ನೀಡಿದರು. ಅಧಿಕಾರಿಗಳು ಕಾವೇರಿ ನದಿ ಪಾತ್ರಗಳನ್ನು ಉಳಿಸುವ ನಿಟ್ಟಿನಲ್ಲಿ ಕಾಳಜಿವಹಿಸಬೇಕಿದೆ. ಅಕ್ರಮ ಮರಳು ದಂಧೆಯನ್ನು ನಿಯಂತ್ರಣಕ್ಕೆ ತರಬೇಕಿದೆ. ಅಕ್ರಮ ಮರಳು ಸಾಗಣೆಗೆ ಸಂಬಂಧಿಸಿದಂತೆ ಈಗಾಗಲೇ ಸುಮಾರು 50 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವ

ು ತಿಳಿಸಿದರು. ಅಧಿಕಾರಿಗಳು ಮತ್ತು ಪೊಲೀಸರ ಕುಮ್ಮಕ್ಕಿನಿಂದ ಅಕ್ರಮ ಮರಳು ಸಾಗಣೆೆ ನಡೆಯುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದ್ದು, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು, ಮರಳು ಗಣಿಗಾರಿಕೆ, ಎಂ.ಸ್ಯಾಂಡ್ ಮತ್ತಿತರ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

  ಈಗಾಗಲೇ ಜಿಲ್ಲೆಯ 13 ಕಡೆಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಪುರುಷೋತ್ತಮ ಅವರು ಮಾಹಿತಿ ನೀಡಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಭೂ ವಿಜ್ಞ್ಞಾನಿ ಮಹೇಶ್ ಅವರು, ಅಕ್ರಮ ಮರಳುಗಾರಿಕೆ ವಿರುದ್ಧ ಕೈಗೊಂಡಿರುವ ಕ್ರುಗಳ ಕುರಿತು ತಿಳಿಸಿದರು. ಜಿಲ್ಲೆಯಲ್ಲಿ ಗುರುತಿಸಿರುವ 26 ಮರಳು ನಿಕ್ಷೇಪ ಬ್ಲಾಕ್‌ಗಳಿಗೆ ಪರಿಸರ ಅನುಮತಿ ಪತ್ರ ಪಡೆಯುವ ಬಗ್ಗೆ ಕಲ್ಲು ಗಣಿಗಾರಿಕೆ, ಎಂ.ಸ್ಯಾಂಡ್‌ಗೆ ಅನುಮತಿ ಮತ್ತಿತರ ವಿಚಾರಗಳ ಕುರಿತು ಮಾಹಿತಿ ನೀಡಿದರು.

ಸೋಮವಾರಪೇಟೆ ತಾಲೂಕಿನ ನೆರುಗಳಲೆ, ಅರೆಯೂರು, ವೀರಾಜಪೇಟೆ ತಾಲೂಕಿನ ಕುಟ್ಟಂದಿ ವ್ಯಾಪ್ತಿಯಲ್ಲಿ ಕಲ್ಲುಗಣಿ ಗುತ್ತಿಗೆ ಮಂಜೂರಾತಿ ಕೋರಿ ಅರ್ಜಿ ಬಂದಿದ್ದು, ಈ ಸಂಬಂಧ ಮುಂದಿನ ಟಾಸ್ಕ್‌ಪೋರ್ಸ್ ಸಮಿತಿಯಲ್ಲಿ ಮಂಡಿಸಲು ತೀರ್ಮಾನಿಸಲಾಯಿತ

ು. ಎಂ-ಸ್ಯಾಂಡ್ ಯೂನಿಟ್ ಆರಂಭಿಸಲು ಅರ್ಜಿ ಬಂದಿದ್ದು, ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸುಮಿತ್ರ, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ತಹಶೀಲ್ದಾರ್‌ಗಳಾದ ಕುಂಞಮ್ಮ, ಶಿವಪ್ಪ, ಮಹದೇವ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News