ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಎ.21: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಜಿ.ಕುಮಾರ್ ನಾಯಕ್ ಅವರನ್ನು ರಾಜ್ಯ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹಾಗೂ ಕೃಷಿ ಇಲಾಖೆಯ ಸರಕಾರದ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್‌ರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ರಾಜ್ಯ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ಮಹೇಶ್ವರ್ ರಾವ್ ಅವರನ್ನು ಕೃಷಿ ಇಲಾಖೆಯ ಸರಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಸ್ಥಳ ನಿಯುಕ್ತಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ ಸ್ಥಳ ನಿರೀಕ್ಷಣೆಯಲ್ಲಿರುವ ಕಾರ್ಯಪಾಲಕ ಇಂಜಿನಿಯರ್ ಸಿ.ಶ್ರೀನಿವಾಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಆದರೆ, ಈ ಸ್ಥಳದಿಂದ ವರ್ಗಾವಣೆಗೊಂಡಿರುವ ಕಾರ್ಯಪಾಲಕ ಎಂಜಿನಿಯರ್ ಎಂ.ಎನ್.ಕೃಷ್ಣಮೂರ್ತಿಗೆ ಸರಕಾರ ಸ್ಥಳ ನಿಯುಕ್ತಿ ನೀಡಿಲ್ಲ.