×
Ad

ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2016-04-21 23:31 IST

ಮಂಗಳೂರು, ಎ.21: ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ದಕ್ಷಿಣ ಕನ್ನಡ ಜಿಲೆಗೆ ಆಗಮಿಸಿದ್ದರು. ಈ ಸಂದರ್ಭ ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರ ಹೊರವಲಯದ ಪಡೀಲ್‌ನಲ್ಲಿ ನಿರ್ಮಾಣಗೊಳ್ಳಲಿರುವ 41 ಕೋಟಿ ರೂ. ವೆಚ್ಚದ ನೂತನ ದ.ಕ. ಜಿಲ್ಲಾ ಕಚೇರಿಗಳ ಸಂಕೀರ್ಣಕ್ಕೆ ಶಿಲಾನ್ಯಾಸ, ಜಿಲ್ಲಾ ವೆನ್ಲಾಕ್ ಹೊಸ ಬ್ಲಾಕ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ, ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಪೊಲೀಸ್ ವಸತಿಗೃಹ ಸಂಕೀರ್ಣಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಬಂಟ್ವಾಳ ತಾಲೂಕಿನ ಸಜಿಪಮೂಡ-ಸುಭಾಷ್ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯವರು ನಿರ್ಮಿಸಿರುವ ಜ್ಞಾನ ಮಂದಿರ ಲೋಕಾರ್ಪಣೆ, ಮಂಗಳೂರು ಶಕ್ತಿನಗರದ ಕಲಾಂಗಣ್‌ನಲ್ಲಿ ಮಾಂಡ್ ಸೊಭಾಣ್ ಸಂಸ್ಥೆ ನೇತೃತ್ವದಲ್ಲಿ ನಿರ್ಮಾಣವಾಗಲಿರುವ 30 ಕೋ.ರೂ. ವೆಚ್ಚದ ಕೊಂಕಣಿ ಮ್ಯೂಸಿಯಂಗೆ ಶಂಕುಸ್ಥಾಪನೆ, ಸುರತ್ಕಲ್‌ನಲ್ಲಿ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿರುವ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಂಜೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor