×
Ad

ಎ.29ರಿಂದ ರಾಷ್ಟ್ರಮಟ್ಟದ ಕ್ರಿಕೆಟ್

Update: 2016-04-21 23:37 IST

ಉಡುಪಿ, ಎ.21: ಉದ್ಯಾವರ ಫ್ರೆಂಡ್ಸ್‌ನ ಬೆಳ್ಳಿಹಬ್ಬದ ಸಂಭ್ರಮದ ಸವಿ ನೆನಪಿಗಾಗಿ ಎ.29ರಿಂದ ಮೇ 1ರವರೆಗೆ ಉದ್ಯಾವರ ಗ್ರಾಪಂ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾಟದ ಟ್ರೋಫಿಯನ್ನು ಶಾಸಕ ಪ್ರಮೋದ್ ಮಧ್ವರಾಜ್ ಅನಾವರಣಗೊಳಿಸಿದರು.
ಕಿದಿಯೂರು ಹೊಟೇಲ್‌ನ ಶೇಷಶಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಭುವನೇಂದ್ರ ಕಿದಿಯೂರು, ಉದ್ಯಾವರ ನಾಗೇಶ್ ಕುಮಾರ್, ಆಸ್ಟ್ರೋ ಮೋಹನ್, ನಿರ್ದೇಶಕ ಸುಧೀರ್ ಹೆಗ್ಡೆ, ಗೌರವಾಧ್ಯಕ್ಷ ರೊನಾಲ್ಡ್ ಮನೋಹರ್ ಕರ್ಕಡ, ಸ್ಥಾಪಕ ಅಧ್ಯಕ್ಷ ಶರತ್ ಕುಮಾರ್, ಅಧ್ಯಕ್ಷ ಅಲೆಕ್ಸ್ ಲೂವಿಸ್, ಪ್ರಧಾನ ಕಾರ್ಯದರ್ಶಿ ಮಹೇಶ್, ಉಪಾಧ್ಯಕ್ಷ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಬಿದ್ ಅಲಿ ಸ್ವಾಗತಿಸಿದರು. ಕೋಶಾಧಿಕಾರಿ ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು. ಈ ಪಂದ್ಯಾಟದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಚೆನ್ನೈ, ಗೋವಾ ರಾಜ್ಯಗಳ 30ಕ್ಕೂ ಅಧಿಕ ತಂಡಗಳು ಭಾಗವಹಿಸಲಿವೆ. ವಿಜೇತರಿಗೆ ಪ್ರಥಮ 3.50 ಲಕ್ಷ ರೂ., ದ್ವಿತೀಯ 2 ಲಕ್ಷ ರೂ. ನಗದು ಹಾಗೂ ಟ್ರೋಫಿಯನ್ನು ನೀಡಲಾಗುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News