ಯಡಿಯೂರಪ್ಪ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ
Update: 2016-04-22 12:10 IST
ಬೆಂಗಳೂರು, ಎ. 21: ರಾಜ್ಯ ಸರಕಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಡಿನೋಟಿಫಿಕೇಶನ್ ಸೇರಿದಂತೆ ಯಡಿಯೂರಪ್ಪ ವಿರುದ್ಧ 15 ಪ್ರಕರಣಗಳಲ್ಲಿ ಸರಕಾರ ಮೇಲ್ಮನವಿ ಸಲ್ಲಿಸಿದ್ದು, ಸರಕಾರ ಪರ ವಕೀಲ ಜೋಸೆಫ್ ಅರಿಸ್ಟಾಟಲ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಯಡಿಯೂರಪ್ಪ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಹೈಕೋರ್ಟ್ ನೀಡಿದ್ದ ತೀರ್ಪು ದೋಷಪೂರಿತವಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾಗಿ ಸರಕಾರ ಹೇಳಿದೆ.