×
Ad

ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಓಂಪ್ರಕಾಶ್

Update: 2016-04-22 21:42 IST

ಕಡೂರು, ಎ.22: ಪೊಲೀಸ್ ಇಲಾಖೆಯಲ್ಲಿ 20 ಸಾವಿರಕ್ಕೂ ಹೆಚ್ಚು ವಿವಿಧ ಹುದ್ದೆಗಳು ಖಾಲಿ ಇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಹೇಳಿದ್ದಾರೆ.

ಅವರು ಶುಕ್ರವಾರ ಶಿವಮೊಗ್ಗ ದಿಂದ ಬೆಂಗಳೂರಿಗೆ ತೆರಳುವ ಸಂದರ್ಭ ಪಟ್ಟಣದಲ್ಲಿ ಮಂಡಿ ವರ್ತಕ ಎಂ. ರಂಗಪ್ಪ ಅವರ ನಿವಾಸಕ್ಕೆ ಖಾಸಗಿ ಭೇಟಿ ಸಂದಭರ್ ಮಾಧ್ಯಮ ಗಳೊಂದಿಗೆ ಮಾತನಾಡುತ್ತಿದ್ದರು. ರಾಜ್ಯದ ಕಾನೂನು ಸುವ್ಯವಸ್ಥೆ ಪೊಲೀಸ್ ಇಲಾಖೆಯಲ್ಲಿ ಅತೀ ದೊಡ್ಡ ಜವಾಬ್ದಾರಿಯಾಗಿದ್ದು, ಇದಕ್ಕೆ ತಕ್ಕಂತೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಇಲಾಖೆಯ ವಿವಿಧ ವಿಭಾಗ ಗಳಲ್ಲಿ ಸಿಬ್ಬಂದಿ ಕೊರತೆಯಿದ್ದರೂ ಇಲಾಖೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು. ಈಚೆಗೆ ಬೆಂಗಳೂರಿನಲ್ಲಿ ಭವಿಷ್ಯ ನಿಧಿ ವಿಷಯವಾಗಿ ಕಾರ್ಮಿಕರು ಪ ್ರತಿಭಟನೆ ನಡೆಸುತ್ತಿದ್ದ ಸಮಯ ದಲ್ಲಿ ಲಾಠಿ ಚಾರ್ಚ್ ಮಾಡಿದ ಬಗ್ಗೆ ಪ್ರಶ್ನಿಸಿದಾಗ ಕೆಲವೊಮ್ಮೆ ಕಾನೂನು ಪಾಲನೆ ಸಮಯದಲ್ಲಿ ಇಂತಹ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದ ಅವರು, ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ತೀವ್ರ ಗೊಳಿಸಿದ್ದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ಸಂಚಾರ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಉಂಟಾ ಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಪನ್ನು ಚದುರಿಸ ಲೇಬೇಕಾದ ಅನಿವಾರ್ಯತೆ ಎದುರಾಯಿತು. ಎಂದು ತಿಳಿಸಿದರು.

 ಬೆಂಗಳೂರು ಅಹಿತಕರ ಘಟನೆ: 250 ಜನರ ಬಂಧನ: ಶಿವಮೊಗ್ಗ:  ಇತ್ತೀಚೆಗೆ ಬೆಂಗಳೂರಿ ನಲ್ಲಿ ಗಾರ್ಮೆಂಟ್ಸ್ ಕಾರ್ಮಿಕರು ನಡೆಸಿದ ಪ್ರತಿಭಟನೆಯ ವೇಳೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ 250 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕ ಓಂ ಪ್ರಕಾಶ್ ತಿಳಿಸಿದ್ದಾರೆ. ಶುಕ್ರವಾರ ನಗರದ ಡಿ.ಎ.ಆರ್. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ತ  ಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಏಕಾಏಕಿ ಸಾವಿರಾರು ಕಾರ್ಮಿಕರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಗೊಂದಲ ಸೃಷ್ಟಿಯಾ ಯಿತು. ಇದಕ್ಕೆ ಗುಪ್ತಚರ, ಪೊಲೀಸ್ ಇಲಾಖೆ ವೈಫಲ್ಯ ಕಾರಣವಲ್ಲ. ಪ್ರತಿಭಟನೆಯಲ್ಲಿ ಮಹಿಳಾ ಕಾರ್ಮಿ ಕರ ಸಂಖ್ಯೆಯೇ ಹೆಚ್ಚಿತ್ತು.

ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಸಾಕಷ್ಟು ತಾಳ್ಮೆ ವಹಿಸಿದ್ದಾರೆ ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News