ಬೇಲೂರಿನ ದೇವಾಲಯಕ್ಕೆ ಬೆದರಿಕೆ
Update: 2016-04-23 12:28 IST
ಹಾಸನ, ಎ.23: ಪುರಾತನ ದೇವಾಲಯವಾಗಿರುವ ಬೇಲೂರಿನ ಶ್ರೀ ಚನ್ನಕೇಶವ ದೇವಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ವರದಿಯಾಗಿದೆ.
ಈ ಬಗ್ಗೆ ದೇವಸ್ಥಾನದ ಕಾರ್ಯನಿರ್ವಾಣಾಧಿಕಾರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ವಿದ್ಯುಲ್ಲತಾ ಅವರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.ಪಾಕಿಸ್ತಾನದ ಉಗ್ರರು ಭಾರತದ ವಿವಿಧ ದೇವಾಲಯ ಮತ್ತು ಪಾರಂಪರಿಕ ಕಟ್ಟಡಗಳನ್ನು ಸ್ಫೋಟಿಸಲು ಸಂಚು ರೂಪಿಸಿದ್ದಾರೆ. ಆ ಹಿಟ್ ಲಿಸ್ಟ್ ನಲ್ಲಿ ಬೇಲೂರಿನ ಚನ್ನಕೇಶವ ದೇವಾಲಯವು ಸೇರಿದೆ ಎಂದು ಗುಪ್ತಚರ ಇಲಾಖೆ ಅಧಿಕಾರಿಯೊಬ್ಬರು ಕಾರ್ಯನಿರ್ವಾಹಣಾಧಿಕಾರಿಗೆ ಏಪ್ರಿಲ್ 21ರಂದು ಕರೆ ಮಾಡಿ ತಿಳಿಸಿದ್ದಾರೆ.
ಪಾಕಿಸ್ತಾನದಿಂದ ಈ ಕರೆ ಬಂದಿದೆ ಎಂದು ಹೇಳಲಾಗಿದ್ದು, ಭಾರತದ ಪುರಾತನ ದೇವಸ್ಥಾನವಾಗಿರುವ ಬೇಲೂರು ದೇವಸ್ಥಾನಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.