×
Ad

ಮೂಡುಬಿದಿರೆ : ಬಂಗಾಲಪದವು ಶ್ರೀ ನಾಗಬ್ರಹ್ಮ ರಕ್ತೇಶ್ವರಿ ಬನದ ವಾರ್ಷಿಕ ಮಹೋತ್ಸವ

Update: 2016-04-23 17:30 IST

ಮೂಡುಬಿದಿರೆ : ಶ್ರೀ ಕ್ಷೇತ್ರ ಬಂಗಾಲಪದವು ಶ್ರೀ ನಾಗಬ್ರಹ್ಮ ರಕ್ತೇಶ್ವರಿ ಬನ ಕರಿಂಜೆ-ಕಲ್ಲಬೆಟ್ಟು ಇದರ 39ನೇ ವರ್ಷದ ವಾರ್ಷಿಕ ಪ್ರತಿಷ್ಠಾ ಮಹೋತ್ಸವವು ಶನಿವಾರ ನಡೆಯಿತು.

 ಮಾರೂರು ಖಂಡಿಗ ಶ್ರೀ ರಾಮದಾಸ ಅಸ್ರಣ್ಣ ಅವರ ಪೌರೋಹಿತ್ಯದಲ್ಲಿ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಕಲಶ ಪ್ರತಿಷ್ಠೆ, ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ, ಅಶ್ಲೇಷಾ ಬಲಿ, ಸತ್ಯನಾರಾಯಣ ಪೂಜೆ, ಮಹಾಪೂಜೆ, ಪ್ರಸಾದ್ ವಿತರಣೆ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನೆರವೇರಿತು.

 ಪೂಜಾ ಸಮಿತಿ ಅಧ್ಯಕ್ಷ ಪುರುಷೋತ್ತಮ ರಾವ್, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಕೆ.ಕೃಷ್ಣರಾಜ ಹೆಗ್ಡೆ, ಕಾರ್ಯದರ್ಶಿ ಶಶಿಧರ ಶೆಟ್ಟಿ, ಜತೆ ಕಾರ್ಯದರ್ಶಿ ದೇವೋಜಿ ರಾವ್, ಸಂಚಾಲಕ ಸುಭಾಷ್ ಪುತ್ರನ್ ಹಾಗೂ ಸದಸ್ಯರು, ಮಹಿಳಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
  ಸಂಜೆ ಕರಿಂಜೆ ಸುವರ್ಣ ನಗರದ "ಸ್ವರ್ಣ ಭಜನಾ ಮಂಡಳಿ" ಸದಸ್ಯರಿಂದ ಭಜನಾ ಕಾರ್ಯಕ್ರಮ. ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಂಗಳೂರಿನ ಕಲಾ ಸಂಗಮ ತಂಡದಿಂದ ತುಳು ಹಾಸ್ಯಮಯ ನಾಟಕ ಒರಿಯರ್ದೊರಿ ಅಸಲ್ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News