ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ವಿಧಿವಶ
Update: 2016-04-24 10:17 IST
ಬೆಂಗಳೂರು, ಎ.24: ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ಬೆಂಗಳೂರಿನ ಶೇಖರ್ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಾಲಂಬಿ ಅವರು ಬಳಲುತ್ತಿದ್ದ ಪುಂಡಲೀಕ ಹಾಲಂಬಿ ಅವರನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಬಸವನ ಗುಡಿಯಲ್ಲಿರುವ ಶೇಖರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಹಾಲಂಬಿ ಅವರು ಕೊನೆಯುಸಿರೆಳೆದಿದ್ದಾರೆ
ಕನ್ನಡ ಸಾಹಿತ್ಯ ಪರಿಷತ್ತಿನ 24ನೇ ಅಧ್ಯಕ್ಷರಾಗಿದ್ದ ಹಾಲಂಬಿ ಅವರು ಇತ್ತೀಚೆಗಷ್ಟೇ ತಮ್ಮ ಅಧಿಕಾರವಧಿಯನ್ನು ಪೂರ್ಣಗೊಳಿಸಿದ್ದರು.