ಟಾಟಾ ಏಸ್ -ಆಂಬುಲೆನ್ಸ್ ಮುಖಾಮುಕಿ ಡಿಕ್ಕಿ; ನಾಲ್ವರು ಸಾವು
Update: 2016-04-24 12:22 IST
ಬೆಳಗಾವಿ , ಎ.24: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೇಕಲಮರಡಿ ಎಂಬಲ್ಲಿ ಇಂದು ಬೆಳಗ್ಗೆ ಅಂಬುಲೆನ್ಸ್ ಮತ್ತು ಟಾಟಾ ಏಸ್ ವಾಹನ ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಅಂಬುಲೆನ್ಸ್‌ನಲ್ಲಿದ್ದ ಮೂವರು ಹಾಗೂ ಟಾಸ್ ಏಸ್‌ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೇಸರ್ಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.