×
Ad

ಆನ್‌ಲೈನ್‌ನಲ್ಲಿ ಐಪಿಎಲ್ ಬೆಟ್ಟಿಂಗ್: ನಾಲ್ವರ ಬಂಧನ

Update: 2016-04-24 22:47 IST

ಕೊಚ್ಚಿ, ಎ.24: ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಐಪಿಎಲ್ ಪಂದ್ಯದ ವೇಳೆ ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ನಿರತವಾಗಿದ್ದ ನಾಲ್ವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉದ್ಯಮಿಗಳಾದ ಅರ್ಷದ್(42), ಶಂಸು(45), ಇಫ್ಸುಲ್ ರೆಹ್ಮಾನ್(34) ಹಾಗೂ ಮುಹಮ್ಮದ್ ರಶೀದ್(31) ಬಾಡಿಗೆ ಮನೆಯಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದಾಗ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಪೊಲೀಸರು ಈ ಮೂವರಿಂದ 6 ಮೊಬೈಲ್ ಫೋನ್‌ಗಳು, ಕಂಪ್ಯೂಟರ್‌ಗಳು ಹಾಗೂ 5.02 ಲಕ್ಷ ರೂ.ವಶಪಡಿಸಿಕೊಂಡಿದ್ದಾರೆ.

ಈ ಮೂವರ ವಿರುದ್ಧ ಕೇರಳ ಗೇಮ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೈದರಾಬಾದ್‌ನಲ್ಲಿ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 5 ವಿಕೆಟ್‌ಗಳ ಅಂತರದಿಂದ ಗೆಲುವು ದಾಖಲಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News