ಆರ್ಯಭಟ ಪ್ರಶಸ್ತಿಗೆ ಪ್ರೊ.ಕೆ.ಚಿನ್ನಪ್ಪ ಗೌಡ ಆಯ್ಕೆ
ಕೊಣಾಜೆ: ಜಾನಪದ ವಿದ್ವಾಂಸ ಹಾಗೂ ಹಾವೇರಿಯ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿಯಾಗಿರುವ ಪ್ರೊ.ಕೆ.ಚಿನ್ನಪ್ಪ ಗೌಡ ಅವರು ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಘ(ರಿ) ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರೊ.ಕೆ.ಚಿನ್ನಪ್ಪ ಗೌಡ ಅವರು ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಆರ್ಯಭಟ ಸಂಸ್ಥೆಯು ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಭಾರತದ ಪ್ರಥಮ ಕೃತಕ ಉಪಗ್ರಹ ಆರ್ಯಭಟ ಇದರ ಯಶಸ್ವೀ ಉಡಾವಣೆಯ ನೆನಪಿಗಾಗಿ 1975ರಲ್ಲಿ ಸ್ಥಾಪಿತವಾದ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಘವು, ಆರ್ಯಭಟ ಹೆಸರಿನಲ್ಲಿ ಶಿಕ್ಷಣ,ವೈದ್ಯಕೀಯ, ಸಮಾಜಸೇವೆ, ಸಂಗೀತ, ನೃತ್ಯ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸಾಧನೆಗೈದ ಸಾಧಕರಿಗೆ ಪ್ರತೀ ವರ್ಷ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ದೇಶದ ಸಾಧಕರು ಮಾತ್ರವಲ್ಲದೆ ವಿದೇಶಗಳಲ್ಲಿ ನೆಲೆಸಿರುವ ಭಾರತೀಯರ ಸಾಧನೆಯನ್ನು ಗುರುತಿಸಿ ಪ್ರತಿ ವರ್ಷ ಸುಮಾರು 60 ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಹೀಗೆ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸಾಧನೆಗೈದವರಲ್ಲಿ ಪ್ರೊ.ಕೆ.ಚಿನ್ನಪ್ಪ ಗೌಡ ಅವರನ್ನು ಈ ಪಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮೇ.18ರಂದು ಬೆಂಗಳೂರಿನ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಆರ್ಯಭಟ ಸಾಂಸ್ಕೃತಿಕ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ.ಎಚ್.ಎಲ್.ಎನ್. ರಾವ್ ಅವರು ತಿಳಿಸಿದ್ದಾರೆ.