ಕೊಪ್ಪಳ : ಲಾರಿ-ಟಂಟಂ ಢಿಕ್ಕಿ : ಹನ್ನೊಂದು ಬಲಿ
Update: 2016-04-25 23:07 IST
ಕೊಪ್ಪಳ, ಎ. 25: ಲಾರಿ ಹಾಗೂ ಟಂಟಂ ನಡುವೆ ಮುಖಾಮುಖಿ ಢಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಳಗೇರಿ ಬಳಿ ಇಂದು ಸಂಭವಿಸಿದೆ.
ಟಂಟಂ ಕೊಪ್ಪಳದಿಂದ ಕುಕನೂರಿಗೆ ತೆರಳುತ್ತಿದ್ದ ವೇಳೆ ಹಳಗೇರಿ ಬಳಿ ಲಾರಿ ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೊಪ್ಪಳ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಕುಕನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಕೊಪ್ಪಳದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಊಟ ಬಡಿಸಲು ಬಂದಿದ್ದರು. ವಾಪಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.