ಮಂಗಳೂರು : ಗೂಂಡಾ ಕಾಯ್ದೆಯಡಿಯಲ್ಲಿ ಬಂಧನ
Update: 2016-04-25 23:22 IST
ಮಂಗಳೂರು, ಎ.25;ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿ ಯ ಉಳ್ಳಾಲ ಧರ್ಮನಗರದ ನಿವಾಸಿಯಾದ ಅಬ್ದುಲ್ ಖಾದರ್ ಎಂಬವರ ಮಗ ಅಲ್ತಾಫ್(29 )ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಲಬುರ್ಗಿ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಈತನ ವಿರುದ್ಧ ಐದು ಗಂಭಿರ ಪ್ರಕರಣಗಳು ದಾಖಲಾಗಿತ್ತು.
ಉಳ್ಳಾಲ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ಮತ್ತು ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತರುಗಳ ವರದಿಯ ಆಧಾರದ ಮೇರೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಗೂಂಡಾ ಕಾಯ್ದೆಯಡಿಯಲ್ಲಿ ಬಂಧನದ ಆಜ್ಞೆಯನ್ನು ಹೊರಡಿಸಿದ್ದರು.