×
Ad

2017ರ ಜನವರಿಯಲ್ಲಿ ‘ಪ್ರವಾಸಿ ಭಾರತ ದಿವಸ್’

Update: 2016-04-25 23:38 IST

ಬೆಂಗಳೂರು, ಎ.25: ಉದ್ಯಾನನಗರಿ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ 2017ರ ಜನವರಿ 7ರಿಂದ ಮೂರು ದಿನಗಳ ಕಾಲ ‘ಪ್ರವಾಸಿ ಭಾರತ ದಿವಸ್’ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಇಂದಿಲ್ಲಿ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಯಶಸ್ವಿಗೆ ಸಮಿತಿಯನ್ನು ರಚಿಸಲಾಗಿದೆ. ದೇಶ-ವಿದೇಶಗಳ ಪ್ರತಿನಿಧಿಗಳು ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರವಾಸೋದ್ಯಮದ ತಾಣಗಳನ್ನು ಪರಿಚಯಿಸುವ ಆಕರ್ಷಕ ವಸ್ತು ಪ್ರದರ್ಶನ, ಸಾಂಸ್ಕೃತಿಕ ಮೇಳ, ಕಲೆ ಮತ್ತು ಸಂಸ್ಕೃತಿ ಬಿಂಬಿಸುವ ವಿನೂತನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದ ಅವರು, ಕಾರ್ಯಕ್ರಮದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ದೇಶಪಾಂಡೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಮೂವತ್ತು ವಿವಿಧ ಪ್ರಶಸ್ತಿಗಳನ್ನು ವಿತರಣೆ ಮಾಡಲಾ ಗುವುದು ಎಂದ ಅವರು, ಕೇವಲ ಒಂದೇ ವರ್ಷದಲ್ಲಿ ಇನ್ವೆಸ್ಟ್ ಕರ್ನಾಟಕ ಹೂಡಿಕೆ ದಾರರ ಸಮಾವೇಶ ಸೇರಿದಂತೆ ಮೂರು ರಾಷ್ಟ್ರೀಯ ಮಟ್ಟದ ಸಮಾವೇಶಗಳನ್ನು ನಡೆಸಿದ ಕೀರ್ತಿ ತಮ್ಮ ಸರಕಾರಕ್ಕೆ ಸಲ್ಲಲಿದೆ ಎಂದರು.
ಬಾದಾಮಿ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರಕಾರ ಬಾದಾಮಿಯನ್ನು ಪಾರಂಪರಿಕ ನಗರ ಎಂದು ಘೋಷಿಸಿದ್ದು, 10 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ ಎಂದ ಅವರು, ಈ ಹಣವನ್ನು ಬಾದಾಮಿ ನರಗದ ಅಭಿವೃದ್ಧಿಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.
ಬೇಲೂರು ಮತ್ತು ಹಳೆಬೀಡಿಗೆ ಉಗ್ರರ ಬೆದರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದ್ದು, ಗೃಹ ಇಲಾಖೆ ಏನು ಕ್ರಮ ಕೈಗೊಂಡಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದ ಅವರು, ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News