ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ ಪ್ರಕರಣ: ಮಹಿಳೆಯರ ಮೇಲಿನ ಕೇಸ್ ವಾಪಸ್

Update: 2016-04-25 18:24 GMT

ಬೆಂಗಳೂರು, ಎ.25: ಇತ್ತೀಚೆಗೆ ನಡೆದ ಕಾರ್ಮಿಕರ ಪ್ರತಿಭಟನೆ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಬಂಧಿಸಿರುವ ಮಹಿಳೆಯರು ಮತ್ತು ಅಮಾಯಕರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ನಗರದ ದಾಸರಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ರಾಘವೇಂದ್ರ ಪೀಪಲ್ ಟ್ರೀ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇಂದ್ರ ಸರಕಾರದ ನೂತನ ಪಿಎಫ್ ನೀತಿಯನ್ನು ವಿರೋಧಿಸಿ ಕಾರ್ಮಿಕರು ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆಯಲ್ಲಿ ಉದ್ದೇಶ ಪೂರ್ವಕವಾಗಿ ಗಲಭೆ ಸೃಷ್ಟಿಸಿ, ಪ್ರತಿಭಟನೆಗೆ ಹಿಂಸಾರೂಪ ನೀಡಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.

ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳು ಮತ್ತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ದೃಶ್ಯಗಳನ್ನು ಆಧರಿಸಿ ಕಿಡಿಗೇಡಿಗಳನ್ನು ಪತ್ತೆಹಚ್ಚಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News