ಪುತ್ತೂರು: ನಗರಸಭಾ ಸದಸ್ಯತ್ವ ಮುಂದುವರಿಕೆಗೆ ಆದೇಶ

Update: 2016-04-25 18:47 GMT

ತ್ತೂರು, ಎ.25: ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಸಹಿತ 6 ಮಂದಿ ಸದಸ್ಯರ ನಗರಸಭಾ ಸದಸ್ಯತ್ವವನ್ನು ಅನೂ ರ್ಜಿತಗೊಳಿಸಿ ರಾಜ್ಯ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ ನೀಡಿದ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠ, ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಸಹಿತ 6 ಮಂದಿ ನಗರಸಭಾ ಸದಸ್ಯರಿಗೆ ಸದಸ್ಯರಾಗಿ ಮುಂದು ವರಿಯಲು 8 ವಾರಗಳ ಕಾಲಾವಕಾಶ ನೀಡಿ ಸೋಮವಾರ ಆದೇಶಿಸಿದೆ.

ನಗರಸಭಾ ಸದಸ್ಯರಾಗಿದ್ದ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ನವೀನ್ ಚಂದ್ರ ನಾಕ್, ರೇಖಾ ಯಶೋಧರ, ಸೀಮಾ ಗಂಗಾಧರ್, ಕಮಲಾ ಆನಂದ ಮತ್ತು ದೀಕ್ಷಾ ಪೈ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಪಕ್ಷದ ವಿಪ್ ಉಲ್ಲಂಘಿಸಿರುವ ಆರೋಪದಲ್ಲಿ ದ.ಕ. ಜಿಲ್ಲಾಧಿಕಾರಿ ನ್ಯಾಯಾಲಯವು ಸದಸ್ಯತ್ವ ವನ್ನು ಅನರ್ಹಗೊಳಿಸಿತ್ತು.

 ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ನೆಲ್ಲಿಕಟ್ಟೆ ಜಗ ದೀಶ್ ಶೆಟ್ಟಿ ಮತ್ತು ಇತರ 5 ಮಂದಿ ಸದಸ್ಯರು ಉಚ್ಚ ನ್ಯಾಯಾಲಯದಲ್ಲಿ ರಿಟ್ ಸಲ್ಲಿಸಿದ್ದರು. ಈ ರಿಟ್ ಅರ್ಜಿಯ ಅಂತಿಮ ತೀರ್ಪಿನಲ್ಲಿ ಜಿಲ್ಲಾಧಿಕಾರಿಗಳ ಆದೇಶವನ್ನು ಉಚ್ಛ ನ್ಯಾಯಾಲಯ ಎತ್ತಿ ಹಿಡಿದಿತ್ತು. ಇದೀಗ ವಿಭಾಗೀಯ ಪೀಠ ಈ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಈ ನಡುವೆ 2ನೆ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಈ ಸಂದರ್ಭ ತಮ್ಮ ಸದಸ್ಯತ್ವನ್ನು ಮುಂದುವರಿಸಬೇಕು ಹಾಗೂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ನೀಡಬೇಕು ಎಂದು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಈ ಮನವಿ ಬಗ್ಗೆ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ ಸದಸ್ಯತ್ವ ಅನ ರ್ಹಗೊಳಿಸಿ ತೀರ್ಪು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ, ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿ ಸಲಾಗಿತ್ತು. ಮೇಲ್ಮನವಿಯ ತನಿಖೆ ನಡೆಸಿದ ನ್ಯಾಯಮೂರ್ತಿಗಳಾದ ಎನ್. ಕುಮಾರ್ ಮತ್ತು ವಿರೂಪಾಕ್ಷರ ವಿಭಾಗೀಯ ಪೀಠವು ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿ 6 ಮಂದಿ ಸದ ಸ್ಯರಿಗೆ ನಗರಸಭಾ ಸದಸ್ಯರಾಗಿ ಮುಂದುವರಿಯಲು ಅವಕಾಶ ನೀಡಿದೆ. ಅರ್ಜಿದಾರರ ಪರವಾಗಿ ನ್ಯಾಯವಾದಿ ರಾಜಶೇಖರ ಹಿಲಿಯಾರು ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News